Karnataka Rain News: 11 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್, ಬಿರುಗಾಳಿ ಸಹಿತ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ
ಮುಂಗಾರು ಪ್ರವೇಶದ ಬೆನ್ನಲ್ಲೇ ರಾಜ್ಯಾದ್ಯಂತ ಮಳೆಯ ಅಬ್ಬರ ಚುರುಕುಗೊಂಡಿದೆ. ಮುಂದಿನ ಕೆಲವು ದಿನಗಳ ಕಾಲ ಕರ್ನಾಟಕದ ವಿವಿಧ ಭಾಗಗಳಲ್ಲಿ ಭಾರಿ ಮಳೆಯಾಗುವ (Karnataka Rain News) ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ. ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಹಾಗೂ ಕರಾವಳಿ ಭಾಗಗಳಲ್ಲಿ ಗುಡುಗು, ಬಿರುಗಾಳಿ ಸಹಿತ ವರುಣನ ಆರ್ಭಟ ಹೆಚ್ಚಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. 11 ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’: ಹವಾಮಾನ ಇಲಾಖೆಯ ಮುನ್ಸೂಚನೆ ನಕ್ಷೆಗಳ ಪ್ರಕಾರ, ಉತ್ತರ ಒಳನಾಡು ಮತ್ತು ಕಲ್ಯಾಣ …